September 10, 2026
Thursday, September 10, 2026
spot_img

ಇರಾನ್ ಮೇಲೆ ಸದ್ಯಕ್ಕೆ ದಾಳಿ ಮಾಡಲ್ಲ: ದೊಡ್ಡಣ್ಣನ ಹೊಸ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಹಾಗೂ ಇರಾನ್ ನಡುವಿನ ಉದ್ವಿಗ್ನತೆ ತೀವ್ರವಾಗಿರುವ ನಡುವೆಯೇ, ಇಂದು ನಡೆಸಲು ಉದ್ದೇಶಿಸಿದ್ದ ಸೈನಿಕ ದಾಳಿಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಗಂಭೀರ ಮಾತುಕತೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

ಒಪ್ಪಂದವಾಗದಿದ್ದರೆ ಮತ್ತೆ ಯುದ್ಧ ಎಚ್ಚರಿಕೆ

ಇರಾನ್ ಜೊತೆ ಒಪ್ಪಂದ ಸಾಧ್ಯವಾಗದಿದ್ದರೆ ಮತ್ತೆ ಭಾರೀ ದಾಳಿ ನಡೆಸಲು ಅಮೆರಿಕ ಸಿದ್ಧವಾಗಿದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಅಗತ್ಯವಾದರೆ ಕ್ಷಣಾರ್ಧದಲ್ಲೇ ಸಂಪೂರ್ಣ ಸೈನಿಕ ಕಾರ್ಯಾಚರಣೆ ಆರಂಭಿಸುವಂತೆ ಸೇನೆಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ. ಕಳೆದ ಕೆಲ ವಾರಗಳಿಂದ ಟ್ರಂಪ್ ಇರಾನ್‌ಗೆ ಗಡುವು ನೀಡುತ್ತಲೇ ಬಂದಿದ್ದರು.

ಇದನ್ನೂ ಓದಿ:

ಮಧ್ಯಪ್ರಾಚ್ಯ ನಾಯಕರ ಮನವಿ

ಕತಾರ್, ಸೌದಿ ಅರೇಬಿಯಾ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ ನಾಯಕರ ಮನವಿಯ ಮೇರೆಗೆ ದಾಳಿಯನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಯುದ್ಧದ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಅಸ್ಥಿರತೆ ಉಂಟಾಗುವ ಆತಂಕ ವ್ಯಕ್ತವಾಗಿತ್ತು.

ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಆತಂಕ

ಇತ್ತೀಚೆಗೆ ಟ್ರಂಪ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಇರಾನ್ ವಿಚಾರವಾಗಿ ಮಾತುಕತೆ ನಡೆಸಿದ್ದರು. ಈಗ ದಾಳಿ ಮುಂದೂಡಿದ ನಿರ್ಧಾರ ಜಾಗತಿಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !