ಮುರುಘಾ ಶ್ರೀಗಳಿಗೆ ಸಿಗದ ಜಾಮೀನು: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲಾಗಿದ್ದ ಮುರುಘಾ ಶ್ರೀ ಅವರ ಜಾಮೀನು ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿತ್ತು. ಅವರ ವಿರುದ್ಧ ಪೋಕ್ಸೋ ಕೇಸ್ ಕೂಡ ದಾಖಲಾಗಿದೆ.

ಇನ್ನೂ ಪೋಕ್ಸೋ ಕೇಸ್ ನಲ್ಲಿ ಜಾಮೀನು ಕೋರಿ ಮುರುಘಾ ಶ್ರೀ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು, ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮುಂದೂಡಿಕೆ ಮಾಡಿದೆ. ಹೀಗಾಗಿ ಇಂದು ಕೂಡ ಸ್ವಾಮೀಜಿಗೆ ಜಾಮೀನು ದೊರೆತಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!