Monday, September 15, 2025

ಹಾಸಿಗೆ-ದಿಂಬು ಕೊಟ್ಟಿಲ್ಲ! ದರ್ಶನ್‌ ಪರ ವಕೀಲರಿಂದ ಮತ್ತೆ ಅರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜೈಲಿನಲ್ಲಿರುವ ನಟ ದರ್ಶನ್‌ಗೆ ಇತ್ತೀಚಿಗಷ್ಟೇ ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿದ್ದರೂ ಕೂಡ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚಿಗೆ ದರ್ಶನ್ ಪರ ವಕೀಲ ಸುನೀಲ್‌ ಅವರು, ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು ಎಂದು ಮನವಿ ಮಾಡಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ ದಿಂಬು, ಹಾಸಿಗೆ ಹಾಗೂ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಬೇಕು ಎಂದು ಆದೇಶಿಸಿತ್ತು. ಆದರೆ ಇದೀಗ ದರ್ಶನ್ ಪರ ವಕೀಲರು, ಕೋರ್ಟ್ ಆದೇಶ ಮಾಡಿದ್ರೂ ಯಾವುದೇ ಸೌಕರ್ಯ ನೀಡಿಲ್ಲ. ಹಾಸಿಗೆ, ದಿಂಬು ಒದಗಿಸಿಲ್ಲ ಎಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಹಾಗೂ ಕೋರ್ಟ್ ಆದೇಶ ಮಾಡಿದ್ರೂ ಯಾವುದೇ ಸೌಕರ್ಯ ನೀಡಿಲ್ಲ. ಕೋರ್ಟ್ ಆದೇಶದ ಪ್ರತಿಯನ್ನು ಇ-ಮೇಲ್ ಮಾಡಲಾಗಿದೆ. ಆದರೂ ದರ್ಶನ್‌ಗೆ ಅದೇ ನರಕ ಮುಂದುವರಿದಿದೆ. ಎರಡು-ಮೂರು ಬಾರಿ ಜೈಲಿಗೆ ಹೋಗಿ ವಿಚಾರಿಸಿದ್ದೀವಿ. ಆದರೂ ಕೂಡ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ