ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಸದ್ಯಕ್ಕೆ ಇಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಊಹಾಪೋಹಗಳು ಅಷ್ಟೇ. ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಯಾವುದು ಇಲ್ಲ. ನಾನು 55 ವರ್ಷಗಳಿಂದ ಪಕ್ಷದಲ್ಲಿ ಇದ್ದೇನೆ. ಏನೇ ಬದಲಾವಣೆ ಆಗಬೇಕಾದ್ರೆ ಸಮಯ ಬಂದಾಗ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.