ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಬೇಡ: ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಇದು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದೆ.

ರಾಷ್ಟ್ರೀಯ ಹಬ್ಬಗಳು, ನಾಡಹಬ್ಬಗಳು ಹಾಗೂ ಜಯಂತಿಗಳನ್ನು ಹೊರತುಪಡಿಸಿ ಇನ್ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಸವರ ಸೂಚನೆ ಮೇರೆಗೆ ಸುತ್ತೋಲೆಎ ಹೊರಡಿಸಿದ್ದು, ಧಾರ್ಮಿಕ ಹಬ್ಬಗಳ ಆಚರಣೆ ಮಾಡಿದ್ದು ಕಂಡುಬಂದಲ್ಲಿ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!