ಬೆಂಗಳೂರು ಬಂದ್ ಗೆ ಅವಕಾಶವಿಲ್ಲ: ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾವೇರಿ ನೀರಿಗಾಗಿ ಕರೆ ನೀಡಿರುವ ಬೆಂಗಳೂರು ಬಂದ್ ಗೆ ಅವಕಾಶವಿಲ್ಲ. ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿಗೆ ಬರಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತರು, ಬೆಂಗಳೂರು ನಗರದಾದ್ಯಂತ ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಒತ್ತಾಯಪೂರ್ವಕವಾಗಿ ಬಂದ್ ಮಾಡುವಂತಿಲ್ಲ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲ. ಹೈಕೋರ್ಟ್ ಆದೇಶದ ಪ್ರಕಾಶ ಬಂದ್ ಗೆ ಅವಕಾಶವಿಲ್ಲ. ಪ್ರತಿಭಟನಾಕಾರರಿಗೆ ಕೋರ್ಟ್ ಆದೇಶ ಪ್ರತಿ ತೋರಿಸಲಾಗುವುದು ಎಂದರು.
ಬಲವಂತವಾಗಿ ಅಂಗಡಿ, ಹೋಟೆಲ್, ಕಚೇರಿಗಳನ್ನು ಬಂದ್ ಮಾಡುವಂತಿಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!