ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾವಣೆಯಿಲ್ಲ,ಪೂರ್ಣ ಅವಧಿಗೆ ಬೊಮ್ಮಾಯಿಯೇ ಮುಖ್ಯಮಂತ್ರಿ:‌ ನಳಿನ್‌ ಕುಮಾರ್ ಕಟೀಲ್‌

ಹೊಸದಿಗಂತ ವರದಿ ಮಂಗಳೂರು:
ರಾಜ್ಯ ಬಿಜೆಪಿ ಸರಕಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ಣ ಅವಧಿಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿಯ ಮೂರನೇ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡಿರುವ ಟ್ವೀಟ್ ಗೆ ಮಂಗಳೂರಿನಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ವಿಚಾರದಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಮುಂದಿನ ಚುನಾವಣೆ ಯನ್ನು ಯಡಿಯೂರಪ್ಪ ಅವರ ಮಾರ್ಗದರ್ಶನ ದಲ್ಲಿ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದರು.

ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ನಲ್ಲಿ ಒಳಜಗಳ ಹೆಚ್ಚಾಗಿದೆ. ಕಾಂಗ್ರೆಸ್‌ ಹಿರಿಯ ನಾಯಕರೇ ಸಿದ್ದರಾಮಯ್ಯ ಅವರನ್ನು ದೂರುತ್ತಿದ್ದಾರೆ. ಮುಂದಿನ ಸಿಎಂ ಜಗಳ ಅಧಿಕಗೊಂಡಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಡಿ ತನಿಖೆ ಎದುರಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಜಾಮೀನು ಮೂಲಕ ಜೈಲಿನಿಂದ ಹೊರಗಿದ್ದಾರೆ. ಇದನ್ನೆಲ್ಲಾ ಮರೆಮಾಚಲು ಕಾಂಗ್ರೆಸ್ ಪಕ್ಷ ಬಿಜೆಪಿ ಬಗ್ಗೆ ಗೊಂದಲದ ಹೇಳಿಕೆ ನೀಡುತ್ತಿದೆ. ಮೊದಲು ಅವರು ಪಕ್ಷದೊಳಗಿನ ಗೊಂದಲ ಸರಿಪಡಿಸಿಕೊಳ್ಳಲಿ. ಬಳಿಕ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!