ಕೊಂಚ ನಿರಾಳ: ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಹತ್ವದ ನಿರ್ಧಾರ ಕೈಗೊಂಡಿದ್ದು, ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಘೋಷಿಸಿದೆ.

ಸತತ ನಾಲ್ಕನೇ ಬಾರಿ ರೆಪೋ ದರವು ಯಥಾಸ್ಥಿತಿಯಲ್ಲಿದ್ದು, ಸದ್ಯ ಆರ್‌ಬಿಐ ರೆಪೋ ದರ ಶೇ.6.50ರಷ್ಟಿದೆ. ಆರ್‌ಬಿಐನ ಈ ನಿರ್ಧಾರದಿಂದ ಜನಸಾಮಾನ್ಯರಿಗೆ ಕೊಂಚ ನೆಮ್ಮದಿ ನೀಡಿದೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಹಣಕಾಸು ನೀತಿ ಪರಾಮರ್ಶೆ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ದೇಶದಲ್ಲಿ ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಏಳಿಗೆಗೆ ಆರ್‌ಬಿಐ ಸಹಕಾರ ನೀಡುವ ಕುರಿತು ಚಿಂತನೆ ನಡೆಸಿದೆ. ಹಾಗೆಯೇ ಆರ್‌ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಸಭೆ ನಿರ್ಧರಿಸಿದೆ ಶಕ್ತಿಕಾಂತ ದಾಸ್‌ ಮಾಹಿತಿ ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!