ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣದಲ್ಲಿ ಕೆಎಸ್‌ಸಿಎಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ ಪೀಠವು ಶುಕ್ರವಾರ ಮಧ್ಯಂತರ ಆದೇಶ ಹೊರಡಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕೆಎಸ್‌ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ. ಆದರೆ, ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ. ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್.ಜೈರಾಮ್ ಅವರಿಗೆ ರಿಲೀಫ್ ಸಿಕ್ಕಿದೆ.