ಎಸ್‌ಐಟಿ ಮೇಲೆ ವಿಶ್ವಾಸ ಇಲ್ಲ, ನನ್ನ ಕೇಸ್ ನಲ್ಲೂ ಡಿಕೆಶಿ ಭಾಗಿ: ರಮೇಶ್ ಜಾರಕಿಹೊಳಿ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಂಸದ ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಡಿ.ಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ನನ್ನ ಕೇಸ್ ನಲ್ಲಿ ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ಸಾಕ್ಷಿಗಳಿವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

ಗೋಕಾಕ್ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಕೇಸ್ ನಲ್ಲಿ ಡಿ.ಕೆ ಶಿವಕುಮಾರ್ ಭಾಗಿಯಾಗಿರುವುದು ಬಯಲಾಗಿದೆ. ಅವರ ಬಳಿ ಅಲ್ಲಿ ಇಲ್ಲಿ ಅಂತಾ ಸುತ್ತು ಹಾಕಿರೋದು ಇದೆ. ನನ್ನ ಕೇಸ್ ನಲ್ಲಿ ಡಿಕೆ ಶಿವಕುಮಾರ್ (DK Shivakumar) ಮಾತಾಡಿದ್ದೇ ಕೊಡುತ್ತೇನೆ. ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದು‌ ಇದೆ, ಆದರೆ ಮಾಧ್ಯಮದ ಮುಂದೆ ಕೊಡಲ್ಲ. ಸಿಬಿಐಗೆ ಕೇಸ್ ಕೊಟ್ಟರೆ ಸಾಕ್ಷಿ ಕೊಡುತ್ತೇನೆ ಎಂದು ಜಾರಕಿಹೊಳಿ ಹೇಳಿದರು.

ನನ್ನ ಕೇಸ್ ನಲ್ಲೂ ಎಸ್‌ಐಟಿ ಮೇಲೆ ವಿಶ್ವಾಸ ಇಲ್ಲ, ಈಗಲೂ ಎಸ್ಐಟಿ ಮೇಲೆ ವಿಶ್ವಾಸ ಇಲ್ಲ‌. ಸಿಬಿಐಗೆ ಕೇಸ್ ಕೊಟ್ಟರೂ ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೇಲುಸ್ತುವಾರಿ ಮಾಡಬೇಕು. ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಎಂದರೆ ಈ ಕೇಸ್ ನಲ್ಲಿ ಫಿಕ್ಸ್ ಆಗಬೇಕು. ನನ್ನ ಕೇಸ್ ನಲ್ಲಿ ಬರೀ ಡಿಕೆ ಶಿವಕುಮಾರ್ ಭಾಗಿಯಾಗಿಲ್ಲ. ನಮ್ಮವರೂ ಕೇಸ್ ನಲ್ಲಿದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ. ಸತತ ನಾಲ್ಕು ವರ್ಷದಿಂದ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದ್ದು, ಇದೆಲ್ಲದಕ್ಕೂ ಜೂನ್ 4ರ ನಂತರ ಇತಿಶ್ರೀ ಹಾಡೋಣ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!