ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ವಿರುದ್ಧ ವಿರೋಧ ಪಕ್ಷವಾದ I.N.D.I.A ಬಣಕ್ಕೆ ಸೇರಿದ ಎಲ್ಲಾ ಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿವೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಇಂದು ಖಚಿತಪಡಿಸಿದ್ದಾರೆ.

ಸದನವನ್ನು ಪಕ್ಷಾತೀತವಾಗಿ ನಡೆಸದ ಆರೋಪದ ಮೇಲೆ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ಪ್ರತಿಪಕ್ಷಗಳು ಮಂಗಳವಾರ ನೋಟಿಸ್‌ ಸಲ್ಲಿಸಿವೆ.

I.N.D.I.A ಬಣದ ಪಕ್ಷಗಳಿಗೆ ಇದು ಅತ್ಯಂತ ನೋವಿನ ನಿರ್ಧಾರವಾಗಿದೆ. ಆದರೆ ಸಂಸದೀಯ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ನಾವು ಈ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ. ಈ ಪ್ರಸ್ತಾವನೆಯನ್ನು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್, ಆರ್‌ಜೆಡಿ, ಟಿಎಂಸಿ, ಸಿಪಿಐ, ಸಿಪಿಐ-ಎಂ, ಜೆಎಂಎಂ, ಎಎಪಿ ಮತ್ತು ಡಿಎಂಕೆ ಸೇರಿದಂತೆ ಸುಮಾರು 61 ವಿರೋಧ ಪಕ್ಷದ ಸಂಸದರಿಂದ ಈ ಪ್ರಸ್ತಾಪಕ್ಕೆ ಬೆಂಬಲದ ಸಹಿ ಸಿಕ್ಕಿದೆ. ಆದರೆ, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಕಾಂಗ್ರೆಸ್‌ನ ಉನ್ನತ ನಾಯಕರು ನೋಟಿಸ್‌ಗೆ ಸಹಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಿವಿಧ ವಿರೋಧ ಪಕ್ಷಗಳ ಸದನದ ನಾಯಕರು ಸಹ ಸಹಿ ಮಾಡಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭಾ ಅಧ್ಯಕ್ಷರನ್ನು ಪದಚ್ಯುತಗೊಳಿಸುವ ಪ್ರಸ್ತಾವನೆಯನ್ನು ಅಂಗೀಕರಿಸಲು ಅಗತ್ಯವಿರುವ ಕನಿಷ್ಠ ಸಂಖ್ಯೆ 50 ಆಗಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!