April 17, 2026
Friday, April 17, 2026
spot_img

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವಾಗ, 55,33,847 ಕೋಟಿ ಸಾಲವಿತ್ತು. ಎಲ್ಲ ಸರ್ಕಾರಗಳ ಅವಧಿಯಲ್ಲಿ ಸಾಲಗಳನ್ನು ಮಾಡಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ 2026 – 2027ನೇ ಸಾಲಿನ ಬಜೆಟ್ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳಿಗೆ ಸಾಲ ಮಾಡುವುದು ಅನಿವಾರ್ಯ.ಇತಿಮಿತಿಯಲ್ಲೇ ಸಾಲ ಮಾಡಲಾಗಿರುವುದನ್ನು ಹೇಳಿದ್ದಾರೆ.

ಜಿಎಸ್ ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರದ ಈ ಹೊಸ ನೀತಿಯಿಂದ ಸುಮಾರು ರಾಜ್ಯಕ್ಕೆ ಸುಮಾರು 10 ಸಾವಿರ ಕೋಟಿಯಷ್ಟು ನಷ್ಟವಾಗಿದೆ. ಮುಂದಿನ ವರ್ಷ 15000 ಕೋಟಿ ಯಷ್ಟು ನಷ್ಟವಾಗಲಿದೆ. ಕೇಂದ್ರ ಸರ್ಕಾರದ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ. ನಮ್ಮ ಬಜೆಟ್ನಲ್ಲಿ ಹೆಚ್ಚು ವಿತ್ತೀಯ ಶಿಸ್ತಿನ ಉಲ್ಲಂಘನೆಯಾಗಿಲ್ಲ ಎಂದು ತಿಳಿಸಿದರು.

ರಾಷ್ಟ್ರದ ಜಿಡಿಪಿ ಬೆಳವಣೆಗೆ 7.4 ರಷ್ಟಿದೆ.ರಾಜ್ಯದ ಜಿಎಸ್‌ಡಿಪಿಯು 2025-26 ರಲ್ಲಿ ಬೆಳವಣಿಗೆ 8.1 ರಷ್ಟಿದೆ. ಕೇಂದ್ರಕ್ಕಿಂತ ನಮ್ಮ ರಾಜ್ಯದ ಬೆಳವಣಿಗೆ ಉತ್ತಮವಾಗಿದೆ. ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ಕೊಟ್ಟಿದ್ದೇವೆ. ಇಲ್ಲಿಯವರೆಗೆ ಗ್ಯಾರಂಟಿಗಳಿಗೆ 1,21,591 ಕೋಟಿ ವೆಚ್ಚ ಮಾಡಲಾಗಿದೆ. ವಿತ್ತಿಯ ಶಿಸ್ತನ್ನೂ ಪಾಲಿಸಲಾಗಿದೆ. 2023-24 ರಿಂದ ಮೂರು ವರ್ಷವೂ ಕೂಡ ಆರ್ಥಿಕ ಶಿಸ್ತು ಕಾಯ್ದೆಯ ಮಾನದಂಡಗಳ ಪಾಲನೆಯಾಗಿದೆ. ಈ ಬಾರಿ ಕೇಂದ್ರದ ಅನುದಾನದಲ್ಲಿ ರಾಜ್ಯಕ್ಕೆ 10,000 ಕೋಟಿಗಳ ಕೊರತೆ ಆಗಿದೆ ಎಂದರು.

ಬಿಜಿಪಿಯು ನಮ್ಮ ಪ್ರಶ್ನಿಸಲು ಯಾವ ನೈತಿಕತೆ ಇದೆ. ಈ ವರ್ಷ ಕೇಂದ್ರದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕೇಂದ್ರ ಸರ್ಕಾರದಲ್ಲಿ 218 ಲಕ್ಷ ಕೋಟಿ ಸಾಲವಿದೆ. ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಆದರೆ ಸಾಲದ ಮಿತಿ ಮಾನದಂಡಗಳಲ್ಲಿ ತಿಳಿಸಿದ ಮಿತಿಯಲ್ಲಿರಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವಾಗ, 55,33,847 ಕೋಟಿ ಸಾಲವಿತ್ತು. ಎಲ್ಲ ಸರ್ಕಾರಗಳ ಅವಧಿಯಲ್ಲಿ ಸಾಲಗಳನ್ನು ಮಾಡಲಾಗಿದೆ ಎಂದರು.

ಕೇಂದ್ರದ ಈ ಕಾಯ್ದೆಯಿಂದ ರಾಜ್ಯಗಳಿಗೆ ಆಗುವ ಅನಾಹುತಗಳ ಬಗ್ಗೆ ಬಜೆಟ್ ನಲ್ಲಿ ತಿಳಿಸಲಾಗಿದೆ. 12.16 ಕೋಟಿ ದೀನದಲಿತರು, ಬಡ ಕಾರ್ಮಿಕರು, ಮಹಿಳೆಯರಿಗೆ ಉಪಯೋಗವಾಗುತ್ತಿತ್ತು. ಕರ್ನಾಟಕದಲ್ಲಿ ವರ್ಷದ 100 ದಿನಗಳು 77 ಲಕ್ಷ ಜನರಿಗೆ ಇದರಿಂದ ಉದ್ಯೋಗ ದೊರೆಯುತ್ತಿತ್ತು. ಜನರ ಉದ್ಯೋಗದ ಹಕ್ಕನ್ನು ವಿಬಿಜಿರಾಮ್ ಜಿ ಕಸಿದುಕೊಂಡಿದೆ. ಗ್ರಾಮಸಭೇಗಳಿಗೆ ನೀಡಿರುವ ಅಧಿಕಾರವನ್ನು ಮೊಟಕುಗೊಳಿಸಲಾಗಿದ್ದು, ಸಂವಿಧಾನದ 73 ಕಲಂ ಕ್ಕೆ ಚ್ಯುತಿ ಮಾಡಿದಂತಾಗಿದೆ. ಈ ಕಾಯ್ದೆಯನ್ನು ರದ್ದುಗೊಳಿಸಿ, ಮನರೇಗಾ ಯೋಜನೆಯನ್ನು ಮರುಸ್ಥಾಪಿಸಲು ಕೇಂದ್ರವ್ನು ಒತ್ತಾಯಿಸಲಾಗುತ್ತಿದೆ. ಈ ಕಾಯ್ದೆಯಿಂದ ರಾಜ್ಯ ಸರ್ಕಾರಕ್ಕೆ 3000 ಕೋಟಿ ರೂ.ಗಳ ಹೆಚ್ಚಿಗೆ ಆರ್ಥಿಕ ಹೊರೆ ಬೀಳಲಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !