ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಬೀದರ್:
ಬೀದರ್ ಕರ್ನಾಟಕದ ಮೊದಲ ಕೋವಿಡ್ ಮುಕ್ತ ಜಿಲ್ಲೆಯಾಗಿದೆ.
ಸೆ.2 ರಂದು ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಈಗಾಗಲೇ ಸೋಂಕು ತಗುಲಿ ಕ್ವಾರೆಂಟೀನ್ನಲ್ಲಿದ್ದ ಎಲ್ಲ ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದೀಗ ಬೀದರ್ನಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿವೆ.
ಕೊರೋನಾ ಮೊದಲನೆ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ಬೀದರ್ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಆದರೆ ಒಂದು ತಿಂಗಳಿನಿಂದ ಕೋವಿಡ್ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಂಡಿತ್ತು. ಒಟ್ಟಾರೆ 24,300 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 23,898 ಮಂದಿ ಗುಣಮುಖರಾಗಿದ್ದಾರೆ. 398 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.