Monday, October 2, 2023

Latest Posts

ರೈತರಿಂದ ಖರೀದಿಸುವ ಹಾಲಿನ ದರದಲ್ಲಿ ಯಾವುದೇ ಕಡಿತ ಮಾಡಬೇಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಪ್ರೋತ್ಸಾಹ ಧನ 1.50 ರೂ. ಕಡಿತ ಮಾಡಿ ಬೆಂಗಳೂರು ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಆದೇಶ ಹೊರಡಿಸಿತ್ತು.

ಇದೀಗ ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು. ಹಾಲಿನ ಪ್ರೋತ್ಸಾಹಧನ ಕಡಿತ ಮಾಡಿದರೇ ರೈತರಿಗೆ ತೊಂದರೆಯಾಗುತ್ತೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರತಿ ಲೀಟರ್​ಗೆ 2.85 ರೂಪಾಯಿ ಪ್ರೋತ್ಸಾಹ ಧನ ಘೋಷಿಸಲಾಗಿತ್ತು. ಇದೀಗ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಹಸಿರು ಮೇವಿನ ಸಮಸ್ಯೆ ಬಗೆಹರಿದಿದೆ. ಇದರಿಂದ ಹಾಲು ಉತ್ಪಾದನೆಯಲ್ಲೂ ಹೆಚ್ಚಳವಾಗಿದೆ. ಹೀಗಾಗಿ ಪ್ರೋತ್ಸಾಹ ಧನ ಕಡಿತಗೊಳಿಸಲು ನಿರ್ಧಾರ ಮಾಡಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!