ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವುದಿಲ್ಲ ಮತ್ತು ಕತ್ತರಿ ಹಾಕುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಪದ್ಮನಾಭನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತದೆ ಎಂಬ ಸುದ್ದಿ ಬರುತ್ತಿದೆ. ಆದರೆ ಇದು ಸುಳ್ಳು ಸುದ್ದಿಯಾಗಿದೆ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗುತ್ತಿಲ್ಲ ಎಂಬ ಮುನಿಯಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಮುನಿಯಪ್ಪನವರು ಹೇಳಿಲ್ಲ. ಏನು ಕೊಡಬೇಕೋ ಅದನ್ನು ಕೊಟ್ಟಿದ್ದೇವೆ ಎಂದು ಉತ್ತರಿಸಿದರು.