ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ: ಗುಂಡೂರಾವ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕೋವಿಡ್ ಸೋಂಕು ಹತೋಟಿಯಲ್ಲಿದ್ದು ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. 10 ಜನರು ಇತರ ಮಾರಕ ಕಾಯಿಲೆಗಳಿಂದ ಸಾವನ್ನಪ್ಪಿದ್ದು, ಕೋವಿಡ್ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!