ದೇಶದಲ್ಲಿ ಸದ್ಯಕ್ಕಿಲ್ಲ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ನಿರ್ಧಾರ: ಕೇಂದ್ರ ಸಚಿವ ಕಿರೆನ್ ರಿಜಿಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಗೊಳಿಸುವ ಸಂಬಂಧ ಯಾವುದೇ ನಿರ್ಧಾರವನ್ನು ಸರ್ಕಾರವು ಕೈಗೊಂಡಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು (Kiren Rijiju) ಅವರು ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಶೀಲಿಸಲು ಮತ್ತು ಶಿಫಾರಸುಗಳನ್ನು ಮಾಡಲು 21ನೇ ಕಾನೂನು ಆಯೋಗಕ್ಕೆ ಮನವಿ ಮಾಡಿತ್ತು ಎಂದು ಹೇಳಿದ್ದಾರೆ.

ಕಾನೂನು ಆಯೋಗ ಒದಗಿಸಿರುವ ಮಾಹಿತಿಯ ಪ್ರಕಾರ, ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ನಿರ್ಧಾರವನ್ನು 22ನೇ ಕಾನೂನು ಆಯೋಗಕ್ಕೆ ಬಿಡಲಾಗಿದೆ ಎಂಬುದನ್ನು ರಾಜ್ಯಸಭೆ ಗಮನಕ್ಕೆ ತಂದರು.

ಏಕರೂಪ ನಾಗರಿಕ ಸಂಹಿತೆ ಜಾರಿಯೂ ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶವಾಗಿದೆ. 2014 ಮತ್ತು 2019ರ ಲೋಕಸಭೆ ಚುನಾವಣಾ ಪ್ರಣಾಳಿಕೆಯಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಯ ಕುರಿತು ಭರವಸೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!