Wednesday, August 10, 2022

Latest Posts

ಕೊರೋನಾ ಲಸಿಕೆ ಎರಡನೇ ದೋಸ್ ಪಡೆಯಲು ವಿಳಂಬವಾದರೂ ಆತಂಕ ಬೇಡ: ಸಚಿವ ಡಾ.ಕೆ. ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಲಸಿಕೆ ಎರಡನೇ ದೋಸ್ ಪಡೆಯಲು ವಿಳಂಬವಾದವರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಕೋವಿಶೀಲ್ಡ್ ಲಸಿಕೆ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಪಡೆದುಕೊಳ್ಳಲು 12 – 16 ವಾರಗಳ ಅಂತರ ನಿಗದಿಪಡಿಸಲಾಗಿದೆ. ಇದರಿಂದಾಗಿ ಹೆಚ್ಚು ಸಮಯ ಅವಕಾಶವವಿದ್ದು, ಅದರ ಅನುಸಾರ ಎರಡನೇ ಪಡೆದುಕೊಳ್ಳಬಹುದಾಗಿದೆ. ಕೊವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆ ಪಡೆಯಲು 4 -6 ವಾರ ಅಂತರವಿದೆ. ಎರಡನೇ ಪಡೆಯಲು ವಿಳಂಬವಾದವರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss