ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಗಳ ಪಾಲಿನ ಜಿಎಸ್‌ಟಿಯನ್ನು (GST) ನೂರಕ್ಕೆ ನೂರರಷ್ಟು ರಾಜ್ಯಗಳಿಗೆ ನೀಡಲಾಗುತ್ತಿದೆ.ಹಣಕಾಸು ಆಯೋಗದ (Finance Commission) ಶಿಫಾರಸು ಆಧರಿಸಿ ರಾಜ್ಯಗಳಿಗೆ ಅನುದಾನ ನೀಡಲಾಗುತ್ತಿದೆ. ಇಲ್ಲಿ ತಾರತಮ್ಯ ಮಾಡಲು ಸಾಧ್ಯವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಲೋಕಸಭೆಯಲ್ಲಿ ಹೇಳಿದ್ದಾರೆ.

ತೆರಿಗೆ ಅನ್ಯಾಯ ಪ್ರಶ್ನಿಸಿ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಭಟನೆಯನ್ನು ಉಲ್ಲೇಖಿಸಿದ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲವು ರಾಜ್ಯಗಳು ಮಾಡುತ್ತಿರುವ ತೆರಿಗೆ ತಾರತಮ್ಯ ರಾಜಕೀಯವಾಗಿ ದೂಷಣೆಯಾಗಿದ್ದು, ಇದು ಸತ್ಯವಲ್ಲ. ಕೇಂದ್ರ ಹಣಕಾಸು ಆಯೋಗದ ಶಿಫಾರಸು ಅನ್ವಯ ಅನುದಾನ ನೀಡುತ್ತಿದೆ ಎಂದರು.

ಎಲ್ಲಾ ರಾಜ್ಯಗಳಿಗೆ ಹಣಕಾಸು ಆಯೋಗವು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಶಿಫಾರಸು ಮಾಡುತ್ತದೆ. ಇದು ರಾಜ್ಯ ಸರ್ಕಾರಗಳಿಗೂ ಗೊತ್ತು. ಈ ಸತ್ಯಾಂಶ ಬಿಟ್ಟು ರಾಜಕೀಯ ಆರೋಪ ಮಾಡಲಾಗುತ್ತಿದೆ ಎಂದರು. ಬೇಕಾಬಿಟ್ಟಿ ಹಣ ಖರ್ಚು ಮಾಡಿ ನಿಮ್ಮ ರಾಜ್ಯದ ಬಜೆಟ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಕಿಡಿಕಾರಿದರು.

ಯಾವುದೇ ಕೇಂದ್ರ ಹಣಕಾಸು ಸಚಿವರು ಹಣಕಾಸು ಆಯೋಗದ ಶಿಫಾರಸುಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ. ನನಗೆ ಈ ರಾಜ್ಯ ಇಷ್ಟವಿಲ್ಲ. ತೆರಿಗೆ ಮರುಪಾವತಿಯನ್ನು ನಿಲ್ಲಿಸಿ ಎಂದು ಹೇಳಲು ಯಾವುದೇ ಹಣಕಾಸು ಸಚಿವರಿಗೆ ಅಧಿಕಾರ ಇಲ್ಲ. ಸಚಿವರು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಈ ವ್ಯವಸ್ಥೆ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!