ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದ್ದು , ಸಿಎಂ ಹುದ್ದೆ ಖಾಲಿ ಇಲ್ಲ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಎಂ ಬದಲಾವಣೆ ಆಗುತ್ತೆ ಅಂತ ಯಾರೂ ಹೇಳಿಲ್ಲ. ಸಿಎಂ ಬದಲಾವಣೆ ಬಗ್ಗೆ ಸಚಿವರು ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಿಎಂ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ ಎಂದರು.
ಯಾರಿಗೂ ಸಿಎಂ ಬದಲಾವಣೆ ಆಗುತ್ತೆ ಎಂಬ ಅನುಮಾನ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಸಚಿವರು ಕೂಡ ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ. ನಾನು ಸಿಎಂ ಆಗಿ ಉಳಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸ್ಪಷ್ಟಪಡಿಸಿದರು.