ನಾಗಾಲ್ಯಾಂಡ್ ಚುನಾವಣೆಯಲ್ಲಿ ಪೂರ್ವ ಮೈತ್ರಿ ಇಲ್ಲ: ಆಮ್ ಆದ್ಮಿ ಪಕ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಗಾಲ್ಯಾಂಡ್ (Nagaland) ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (Aam Aadmi Party) ಸ್ಪರ್ಧಿಸಲಿದೆ ಎಂದು ಈಶಾನ್ಯ ಉಸ್ತುವಾರಿ ರಾಜೇಶ್ ಶರ್ಮಾ (Rajesh Sharma) ಹೇಳಿದ್ದಾರೆ.

60 ಸದಸ್ಯರ ವಿಧಾನಸಭೆಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ನಾವು ಸಾಧ್ಯವಾದಷ್ಟು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ. ಅದೇ ರೀತಿ ಇಲ್ಲಿ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇರುವುದಿಲ್ಲ ಎಂದು ಶರ್ಮಾ ಹೇಳಿದ್ದಾರೆ.

ಮಾಜಿ ಶಾಸಕ ಆಸು ಕೀಹೋ ಅವರನ್ನು ಎಎಪಿಯ ನಾಗಾಲ್ಯಾಂಡ್ ಘಟಕದ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಅವರು ಹೇಳಿದರು.

ಉತ್ತಮ ಆಡಳಿತ, ಪ್ರಾಮಾಣಿಕ ರಾಜಕೀಯ ಮತ್ತು ಭ್ರಷ್ಟಾಚಾರ ನಿರ್ಮೂಲನೆಯೊಂದಿಗೆ ರಾಜ್ಯದ ಒಟ್ಟಾರೆ ಅಭಿವೃದ್ಧಿಗಾಗಿ ನಾಗಾಲ್ಯಾಂಡ್ ಜನರು ಮತ ಚಲಾಯಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಿ ವಿಫಲವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!