ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ರಾಜ್ಯದ ಮೇಲೆ ಹಿಂದಿ ಹೇರಿಕೆ ನಡುವೆ ಸಿಎಂ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ ಇಡಲು ಮುಂದಾಗಿದೆ. ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಡೈರೆಕ್ಷನ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಇಂದು ಅಧಿಕೃತ ಸುತ್ತೋಲೆ ಹೊರಡಿಸಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಅಡಿಯಲ್ಲಿ ಸುತ್ತೋಲೆ ಹೊರಡಿಸಿದ್ದು, ಒಂದು ಭಾಷೆ ಬೆಳವಣಿಗೆ ಆಗಬೇಕಿದ್ರೆ ಆ ನೆಲದಲ್ಲಿ ಉತ್ಪಾದನೆ, ಮಾರುಕಟ್ಟೆ ಮತ್ತು ವ್ಯವಹಾರ ಗಳು ಸ್ಥಳೀಯ ಭಾಷೆಯಲ್ಲಿ ಇರಬೇಕು. ಕನ್ನಡ ಕಡ್ಡಾಯವಾಗಿರಬೇಕು ಉತ್ಪನ್ನದ ಹೆಸರು ಮತ್ತು ಅವುಗಳ ನಿರ್ದೇಶನವು ಕನ್ನಡ ಭಾಷೆಯಲ್ಲಿ ಇರಬೇಕು ಎಂದು ಆದೇಶಿಸಿದೆ.