ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ‘ನೋ ಎಂಟ್ರಿ’: ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ‘ಹೇಡಿತನ’ದ ಪಟ್ಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ‘ಎಕ್ಸ್’ ವೇದಿಕೆಯಲ್ಲಿ ಸರಣಿ ಪೋಸ್ಟ್ ಮಾಡಿರುವ ಜೆಡಿಎಸ್, ಇದು ಸರ್ಕಾರದ “ಹೇಡಿತನ ಮತ್ತು ಭ್ರಷ್ಟಾಚಾರದ ಭಯ” ಎಂದು ಬಣ್ಣಿಸಿದೆ. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ. ಅವುಗಳ ಧ್ವನಿ ಅಡಗಿಸುವುದು ಸಂವಿಧಾನ ವಿರೋಧಿ ನಡೆ ಎಂದು ಜೆಡಿಎಸ್ ಕಿಡಿಕಾರಿದೆ. “ಸದಾ ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು, … Continue reading ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ‘ನೋ ಎಂಟ್ರಿ’: ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ‘ಹೇಡಿತನ’ದ ಪಟ್ಟ!