ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್‌ನಲ್ಲಿ ಬೆಂಗಳೂರಿನ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಸಮುದ್ರ ಪ್ರವೇಶ ನಿಷೇಧಿಸಲಾಗಿದೆ.
ಭಾನುವಾರ ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನ ಗೌತಮ್ (17) ಈಜಲು ಹೋಗಿ ಮೃತಪಟ್ಟಿದ್ದರು. ಇದೀಗ ಎಚ್ಚೆತ್ತ ಅಧಿಕಾರಿಗಳು ಮಧ್ಯಪ್ರವೇಶಿಸಿ ಪ್ರವಾಸಿಗರ ಹಾವಳಿಗೆ ಕಡಿವಾಣ ಹಾಕಿದ್ದಾರೆ.
ವಾರಾಂತ್ಯದ ಕಾರಣ ಹೆಚ್ಚಿನ ಪ್ರವಾಸಿಗರು ಬೀಚ್‌ಗೆ ಆಗಮಿಸಿದ್ದು, ಮುರುಡೇಶ್ವರ ಪೊಲೀಸರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ವಿಧಿಸಿದ್ದಾರೆ. ಇದರಿಂದಾಗಿ ವಾರಾಂತ್ಯದ ದಸರಾ ರಜೆಯ ವೀಕೆಂಡ್ ಎಂಜಾಯ್ ಮಾಡಲು ಬಂದಿದ್ದ ಪ್ರವಾಸಿಗರ ಖುಷಿಗೆ ಬ್ರೇಕ್ ಬಿದ್ದಿದ್ದು ಕಡಲ ತೀರ ಖಾಲಿ ಹೊಡೆಯುತ್ತಿದೆ.