ಹೊಸದಿಗಂತ ವರದಿ ಮಡಿಕೇರಿ:
ನಗರದ ಪ್ರಮುಖ ಪ್ರವಾಸಿ ತಾಣವಾದ ರಾಜಾಸೀಟ್’ಗೆ ನ.16 ರಿಂದ ನ.30ರವರೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:
ಮಡಿಕೇರಿ ನಗರದ ಮೇಜರ್ ಮುತ್ತಣ್ಣ ವೃತ್ತದಿಂದ ರಾಜಾಸೀಟ್ ಕಡೆಗೆ ಹೋಗುವ (ಎಂ.ಜಿ.)ರಸ್ತೆಯನ್ನು ಕಾಂಕ್ರಿಟ್ ರಸ್ತೆಯನ್ನಾಗಿ ಪರಿವರ್ತಿಸಲು ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನ.16ರಿಂದ ಡಿ.15ರವರೆಗೆ ಜಿಲ್ಲಾಧಿಕಾರಿಯವರ ಕಚೇರಿಗೆ ತೆರಳುವ ಅಡ್ಕ ರಸ್ತೆಯಿಂದ ಲಿವಾ ಕ್ಲಿನಿಕ್’ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಹಾಗೂ ನ.16ರಿಂದ ನ.30ರವರೆಗೆ ರಾಜಾಸೀಟ್’ಗೆ ಸಾರ್ವಜನಿಕರ/ಪವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.



