ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಂಘರ್ಷದ ನಡುವೆ ಮಾಲ್ಡೀವ್ಸ್ ಸರ್ಕಾರ ಇಸ್ರೇಲ್ ನ ಪಾಸ್‌ಪೋರ್ಟ್ ಹೊಂದಿರುವವರ ಪ್ರವೇಶವನ್ನು ನಿಷೇಧಿಸಿದೆ.
ಇದರಿಂದ ಅಸಮಾಧಾನಗೊಂಡಿರುವ ಇಸ್ರೇಲ್ ಇದೀಗ ತನ್ನ ದೇಶದ ಪ್ರವಾಸಿಗರಿಗೆ ಮಾಲ್ಡೀವ್ಸ್‌ಗೆ ತೆರಳುವ ಬದಲು ಭಾರತಕ್ಕೆ ತೆರಳಿ ಎಂದು ಕರೆ ನೀಡಿದೆ.
ಇದಕ್ಕಾಗಿ ಭಾರತದ ವಿವಿಧ ಪ್ರವಾಸೋದ್ಯಮ ಸ್ಥಳಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ.
ಮಾಲ್ಡೀವ್ಸ್ ಸರ್ಕಾರ ಇಸ್ರೇಲಿಗರನ್ನು ನಿಷೇಧಿಸಿದ್ದು, ಇದಕ್ಕೆ ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಠಕ್ಕರ್ ನೀಡಿದೆ. ಲಕ್ಷ ದ್ವೀಪ, ಗೋವಾ, ಕೇರಳ ಮುಂತಾದೆಡೆಗಳ ಸುಂದರ ಕಡಲ ತೀರಗಳ ಫೋಟೋವನ್ನು ಹಂಚಿಕೊಂಡಿದೆ.
https://x.com/IsraelinIndia/status/1797517799767584825/photo/4
ʼʼಮಾಲ್ಡೀವ್ಸ್ ಇನ್ನು ಮುಂದೆ ಇಸ್ರೇಲಿಗರನ್ನು ಸ್ವಾಗತಿಸುವುದಿಲ್ಲ. ಹೀಗಾಗಿ ಇಸ್ರೇಲಿ ಪ್ರವಾಸಿಗರು, ಆತ್ಮೀಯವಾಗಿ ಸ್ವಾಗತಿಸುವ, ಅತ್ಯುತ್ತಮ ಆತಿಥ್ಯ ನೀಡುವ ಸುಂದರ ಮತ್ತು ಅದ್ಭುತ ಕಡಲ ತೀರಗಳಿರುವ ಭಾರತಕ್ಕೆ ಭೇಟಿ ನೀಡಿ. ಲಕ್ಷ ದ್ವೀಪ, ಗೋವಾ, ಅಂಡಮಾನ್ & ನಿಕೋಬಾರ್ ಮತ್ತು ಕೇರಳದ ಸುಂದರ ಕಡಲ ತೀರಗಳನ್ನು ಸಂದರ್ಶಿಸಿʼʼ ಎಂದು ರಾಯಭಾರ ಕಚೇರಿ ಪ್ರವಾಸಿಗರಿಗೆ ಸಂದೇಶ ನೀಡಿದೆ.
ಮಾಲ್ಡೀವ್ಸ್ ಭಾನುವಾರ (ಜೂನ್ 2)ರಂದು ಇಸ್ರೇಲ್ ಪಾಸ್‌ಪೋರ್ಟ್ ಹೊಂದಿರುವ ವ್ಯಕ್ತಿಗಳು ಮಾಲ್ಡೀವ್ಸ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವ ನಿರ್ಧಾರವನ್ನು ಪ್ರಕಟಿಸಿತ್ತು.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ತೆರಳಿ, ಅಲ್ಲಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು ಎಂದಿದ್ದಕ್ಕೇ ತಗಾದೆ ತೆಗೆದಿದ್ದ ಮಾಲ್ಡೀವ್ಸ್‌ನ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಭಾರತ ಹಾಗೂ ಮೋದಿ ಕುರಿತು ಮಾಲ್ಡೀವ್ಸ್ ಅಸಮಾಧಾನದ ಹೇಳಿಕೆ ನೀಡಿದ ಬಳಿಕ ದೇಶದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಶುರುವಾದ ಕಾರಣ ಅಲ್ಲಿಗೆ ತೆರಳುವವರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿದಿತ್ತು.