ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಕಿನ ಹಬ್ಬ ದೀಪಾವಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಬಾರಿ ಪಟಾಕಿ ಸಿಡಿಸುವ ಸಂಭ್ರಮಕ್ಕೆ ರಾಜ್ಯ ಸರ್ಕಾರ ಎರಡುಗಂಟೆಗಳ ಸಮಯಾವಕಾಶ ನಿಗದಿ ಮಾಡಿದೆ.
ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ನಿರ್ದೇಶನವಿದೆ ಎಂದು ಹೇಳಿದರು.
ಪಟಾಕಿ ಸಿಡಿಸುವುದು ಅಪಾಯಕಾರಿ. ಪಟಾಕಿಗಳನ್ನು ಸಿಡಿಸುವುದರಿಂದ ಪರಿಸರಕ್ಕೆ ಗಂಭೀರ ಹಾನಿ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ.
ಕತ್ತಲೆಯಿಂದ ಬೆಳಕಿನೆಡೆಗೆ ಪರಿವರ್ತನೆಯಾಗುವ ಹಬ್ಬದಲ್ಲಿ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಕ್ರ್ಯಾಕರ್‌ಗಳನ್ನು ಮಾತ್ರ ಬಳಸಬೇಕು. ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.