ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ, ಪುರಸ್ಕರಿಸಿ ಮಾತನಾಡಿದ ಅವರು, ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ತಿಳಿಸಿದರು.‌
ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದು ಹೇಳಿದರು.

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!