Sunday, August 14, 2022

Latest Posts

ಸದ್ಯ ಸಂಪುಟ ವಿಸ್ತರಣೆ ನಡೆಯುವುದಿಲ್ಲ: ಸಚಿವ ಬಿ.ಎ. ಬಸವರಾಜ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಹುಬ್ಬಳ್ಳಿ:

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಯಡಿಯೂರಪ್ಪ ಅವರು ಸ್ಪಷ್ಟತೆ ನೀಡಿದ್ದಾರೆ‌. ಸದ್ಯದ ಮಟ್ಟಿಗೆ ಸಂಪುಟ ವಿಸ್ತರಣೆ ನಡೆಯೋದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾವುದೆ ಭಿನ್ನಾಭಿಪ್ರಾಯವಿಲ್ಲ. ನಮ್ಮ ಹಿರಿಯ ನಾಯಕರಾದ ಪ್ರಲ್ಹಾದ ಜೋಶಿ ನಮ್ಮೊಂದಿಗೆ ಇದಾರೆ ಅವರನ್ನೇ ಕೇಳಿ ಪಕ್ಷದಲ್ಲಿ ಭಿನಾಭಿಪ್ರಾಯದ ಮಾತೆ ಇಲ್ಲ ಎಂದರು. ಹುಬ್ಬಳ್ಳಿ-ಧಾರವಾಡದ ಮಹಾನಗರ ಪಾಲಿಕೆ ಚುನಾವಣೆ ಬಹಳ ದಿನಗಳಿಂದ ನೆನೆಗುದಿಗೆ ಬೀಳುತ್ತ ಸಾಗಿದೆ. ತಕ್ಷಣ ಮಾಡಬೇಕು ಎಂಬುದು ಸರ್ಕಾರದ ಅಭಿಲಾಷೆಯ ಕೂಡಾ ಎಂದರು.
ಕೊರೊನಾ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆಗೆ ಹಿನ್ನಡೆಯಾಗಿತ್ತು. ಕೊರೊನಾ ಸೋಂಕು ಈಗ ಕಡಿಮೆಯಾಗಿದೆ. ಹೀಗಾಗಿ ಸಮಯ ನೋಡಿಕೊಂಡು ಬೆಳಗಾವಿ, ವಿಜಯಪುರ, ಗುಲ್ಬರ್ಗಾ, ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss