ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ ಯಾವುದೇ ಅನಧಿಕೃತ ಫ್ಲೆಕ್ಸ್ ಬ್ಯಾನರ್ ಅಳವಡಿಸುವಂತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರು ನಗರದ ಸೌಂದರ್ಯ ಕಾಪಾಡಲು ಫ್ಲೆಕ್ಸ್ ನಿಷೇಧಿಸುತ್ತಿದ್ದೇವೆ.ಸಿ.ಎಂ, ಡಿ ಸಿ ಎಂ, ಬಿಜೆಪಿ, ಕಾಂಗ್ರೆಸ್ ಸೇರಿ ಯಾರ ಫ್ಲಾಕ್ಸ್ ಹಾಕುವಂತಿಲ್ಲ. ಫ್ಲೆಕ್ಸ್ ಹಾಕದಂತೆ ವೈಯಕ್ತಿಕವಾಗಿ ವಿನಮ್ರತೆಯಿಂದ ಮನವಿ ಮಾಡಿಕೊಳ್ಳುತ್ತಿದ್ದೇನೆ. ಒಂದು ವೇಳೆ ಫ್ಲೆಕ್ಸ್ ಬ್ಯಾನರ್ ಅಳವಡಿಸಿದರೆ ಮುಲಾಜಿ ಇಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸರ್ಕಾರಿ ಜಾಹಿರಾತು ಪ್ರಕಟಿಸುವ ಬಗ್ಗೆ ಶೀಘ್ರದಲ್ಲೇ ನಿಯಮ ರೂಪಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.