ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದುವೆಯಾಗಲು ಹೆಣ್ಣು ಸಿಗದ ಕಾರಣ ಹತಾಶ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಕ್ಕೇರಿಯಲ್ಲಿ ನಡೆದಿದೆ.
ಶಾಂತಿನಾಥ ಸುರೇಶ್ ಕೇಸ್ತಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕ ನಗರದಲ್ಲಿ ಮೋಟಾರ್ ಸೈಕಲ್ ರಿಪೇರಿ ಅಂಗಡಿ ನಡೆಸುತ್ತಿದ್ದ. ಸಾಲಬಾಧೆಯಿಂದ ಹಾಗೂ ಮದುವೆಗೆ ಹೆಣ್ಣು ಸಿಗದೆ ನೊಂದಿದ್ದ. ಹೀಗಾಗಿ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.