ನಾಳೆ ರಾಜ್ಯದಲ್ಲಿ ಸರಕಾರಿ ರಜೆ ಘೋಷಣೆ ಇಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆ ರಾಮಲಲಾ ಪ್ರಾಣ ಪ್ರತಿಷ್ಠಾಪನೆಗೆ ಜನವರಿ 22ರಂದು ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ನೀಡುವುದಿಲ್ಲ, ಬದಲಿಗೆ ರಾಜ್ಯದ ಮುಜರಾಯಿ ಇಲಾಖೆಯಲ್ಲಿನ ದೇವಸ್ಥಾನಗಳಲ್ಲಿ ಪೂಜಾ, ಕೈಕಂರ್ಯವನ್ನು ನೇರವೇರಲಿದೆ ಎಂದು ತಿಳಿಸಿದರು.

ಇನ್ನೂ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾಳೆ ದಾಸೋಹ, ಪಾನಕ, ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾಳೆ ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!