ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲ: ಮಂಡಳಿ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಮಾರ್ಚ್ 7 ರಂದು ನಡೆದ ಭೌತಶಾಸ್ತ್ರ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಯ ಪ್ರಶ್ನೆಗಳು ಕಷ್ಟಕರವಾಗಿದ್ದರಿಂದ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತಿದೆ ಎನ್ನುವ ಸುದ್ದಿ ಎಲ್ಲೆಡೆ ಹಬ್ಬಿದೆ. ಆದರೆ ಇದು ನಿಜವಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸ್ಪಷ್ಟನೆ ನೀಡಿದೆ.

ಭೌತಶಾಸ್ತ್ರದ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಕಷ್ಟವಾಗಿತ್ತು, ಪತ್ರಿಕೆಯ ಎ ಭಾಗದಲ್ಲಿ ಬ್ಲೂಪ್ರಿಂಟ್ ಅಲ್ಲದ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪ್ರಯತ್ನಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ. ಪ್ರಶ್ನೆಗಳನ್ನು ಅಟೆಂಪ್ಟ್ ಮಾಡದವರಿಗೆ ಯಾವ ಅಂಕಗಳು ಇಲ್ಲ ಎಂದು ಬರೆದಿದ್ದ ನಕಲಿ ಸುತ್ತೋಲೆ ಎಲ್ಲೆಡೆ ವೈರಲ್ ಆಗಿತ್ತು. ಇದು ನಕಲಿ ಪೋಷಕರನ್ನು ತಪ್ಪುದಾರಿಗೆಳೆಯುವಂಥದ್ದಾಗಿದೆ. ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲ ಎಂದು ಮಂಡಳಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!