ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನು ಮುಂದೆ ಕಬ್ಬನ್ ಪಾರ್ಕ್‌ನಲ್ಲಿ ನಡೆಯುವ ಯಾವುದೇ ಗುಂಪು ಚಟುವಟಿಕೆಗಳಿಗೆ ತೋಟಗಾರಿಕಾ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅನುಮತಿ ಅಗತ್ಯ.
ಅನುಮತಿ ಇಲ್ಲದೇ ಕಬ್ಬನ್ ಪಾರ್ಕ್‌ನಲ್ಲಿ ಸಂಘಟನೆಗಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದು ಇದು ಅಲ್ಲಿಗೆ ಬರುವ ಜನರಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗ ಕಬ್ಬನ್ ಪಾರ್ಕ್ ಆಡಳಿತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
20 ಜನರನ್ನು ಮೀರುವ ಕೂಟಗಳಿಗೆ ಮುಂಗಡ ಅನುಮೋದನೆಯ ಅಗತ್ಯವಿದೆ. ತೋಟಗಾರಿಕೆ ಇಲಾಖೆಯಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಪೊಲೀಸ್ ಇಲಾಖೆಯ ಅನುಮತಿಯನ್ನು ಪಡೆಯಬೇಕು.