ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಜಿಲ್ಲೆಯ ಜೋಳದಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 25 ಕ್ಕೂ ಹೆಚ್ಚು ಮಂದಿ ಅಸ್ವಸ್ವರಾಗಿದ್ದಾರೆ.
ವರದಿಗಳ ಪ್ರಕಾರ ಗ್ರಾಮದಲ್ಲಿ ನೀರು ಕಲುಷಿತಗೊಂಡಿದ್ದು, ನೀರು ಕುಡಿದು 25ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಮತ್ತು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.