Thursday, March 30, 2023

Latest Posts

ಆತುರದ ನಿರ್ಧಾರ ಬೇಡ, ಮಾತುಕತೆ ನಡೆಸೋಣ: ಪ್ರತಿಭಟನೆಗೆ ಹೊರಟ ಸರ್ಕಾರಿ ನೌಕರರಿಗೆ ಸಂದೇಶ ರವಾನಿಸಿದ ಸಿಎಂ ಬೊಮ್ಮಾಯಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

7ನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿಗೆ ತರುವ ಕುರಿತು ಬದ್ಧತೆ ಪ್ರಕಟಿಸಬೇಕು ಮತ್ತು ಹಳೆ ಪಿಂಚಣಿ ಯೋಜನೆ (ಓಪಿಎಸ್‌) ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಹೋರಾಟ ನಡೆಸಲು ರಾಜ್ಯ ಸರ್ಕಾರಿ ನೌಕರರ ಸಂಘವು ತೀರ್ಮಾನಿಸಿದೆ .

ಇತ್ತ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೂಡಾ ಪ್ರತಿಭಟನೆಗೆ ಅವಕಾಶವಿಲ್ಲದಂತೆ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ವಿಧಾನಸಭೆಯಲ್ಲೇ ಹೇಳಿದ್ದಾರೆ.

ಇದರ ಬೆನ್ನಲ್ಲೇ ಸರ್ಕಾರಿ ನೌಕರರ ಬೇಡಿಕೆಗಳ ವಿಚಾರದಲ್ಲಿ ಸರ್ಕಾರ ಬದ್ಧತೆಯನ್ನು ಹೊಂದಿದೆ. ಬಜೆಟ್‌ನಲ್ಲಿ ಕೂಡಾ ಹಣ ತೆಗೆದಿಡಲಾಗಿದೆ. ಏಳನೇ ವೇತನ ಆಯೋಗದ ವರದಿಯನ್ನು ಪರಿಗಣಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ಅವರು ಬಜೆಟ್‌ ದಿನವೂ ಹೇಳಿದ್ದರು. ಇದೀಗ ನೌಕರರ ಸಂಘದ ಪದಾಧಿಕಾರಿಗಳ ಜತೆ ಮಾತುಕತೆಗೂ ಅವರು ಮುಂದಾಗಿದ್ದಾರೆ ಎನ್ನಲಾಗಿದೆ.

ಯಾವುದೇ ಆತುರದ ನಿರ್ಧಾರ ಬೇಡ, ಮಾತುಕತೆ ನಡೆಸೋಣ ಎಂಬ ಸಂದೇಶವನ್ನು ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ಸಿಎಂ ರವಾನಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರು ಬುಧವಾರ ಬಳ್ಳಾರಿ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಗುರುವಾರ (ಫೆ. ೨೩) ಅಮಿತ್‌ ಶಾ ಭೇಟಿ ನೀಡಲಿದ್ದಾರೆ. ಅದಾದ ಬಳಿಕ ಶುಕ್ರವಾರ (ಫೆ. ೨೪)ದಂದು ಪದಾಧಿಕಾರಿಗಳ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!