ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಣಕಾಸು ಸಚಿವಾಲಯದ ಈ ವರ್ಷದ ಬಜೆಟ್ ನಿಂದ ಮಧ್ಯಮ ವರ್ಷಗದ ಜನರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗು ಪ್ರಧಾನಿ ಮೋದಿ ಮಧ್ಯಮ ವರ್ಗದ ಜನರಿಗೆ ದ್ರೋಹ ಮಾಡಿದ್ದಾರೆ ಎಂದಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ, ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ, ಕೋವಿಡ್ ನಂತರ ಎಲ್ಲಾ ವಲಯಗಳು ಪರಿಹಾರಕ್ಕಾಗಿ ಆಶಿಸುತ್ತಿದ್ದವು ಆದರೆ ಆ ಎಲ್ಲಾ ಮಧ್ಯಮ ವರ್ಗದವರಿಗೆ ಈ ಬಜೆಟ್ ನಿರಾಸೆ ತಂದಿದೆ ಎಂದಿದ್ದಾರೆ.
ಯುವಕರಿಗೆ, ಸಣ್ಣ ಉದ್ಯಮಿದಾರರಿಗೆ, ಕೃಷಿಕರಿಗೆ, ಮಧ್ಯಮ ವರ್ಗದವರಿಗೆ, ಬಡವರಿಗೆ ಈ ಬಜೆಟ್ 2022 ಏನೂ ತಂದುಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.
. #Budget2022 की सच्चाई- ‘कुछ नहीं बजट’
• गरीब की जेब ख़ाली, कुछ नहीं,
• नौकरीपेशा की जेब ख़ाली, कुछ नहीं,
• मध्यम वर्ग की जेब ख़ाली, कुछ नहीं,
• किसान की जेब ख़ाली, कुछ नहीं,
• युवाओं की आशा टूटी, कुछ नहीं,
• खपत बढ़ाने के लिए, कुछ नहीं,
• छोटे उद्योग को बढ़ावा, कुछ नहीं— Randeep Singh Surjewala (@rssurjewala) February 1, 2022