ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ವಿವಿಧ ಕಡೆ ಉತ್ತಮ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಜಿಲ್ಲಾಡಳಿತ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಜುಲೈ 08 ರಂದು ರಜೆ ಘೋಷಿಸಿದೆ ಎಂದು ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ಉಡುಪಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.
ಜಿಲ್ಲಾಡಳಿತ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಜುಲೈ 08 ರಂದು ಯಾವುದೇ ರಜೆ ಘೋಷಿಸಿ ಆದೇಶ ಮಾಡಿರುವುದಿಲ್ಲ ಎಂದು ಉಡುಪಿ ಸ್ಪಷ್ಟನೆ ನೀಡಿದೆ.
ಜುಲೈ 08 ರಂದು ರಜೆ ಎಂದು ದುಷ್ಕರ್ಮಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಈ ನಕಲಿ ಸುತ್ತೋಲೆ ಭಾನುವಾರ ಸಂಜೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾಗರಿಕರಲ್ಲಿ ಗೊಂದಲ ಸೃಷ್ಟಿಸಿದೆ.
ಈ ನಕಲಿ ಸುತ್ತೋಲೆಯನ್ನು ಗಮನಿಸಿದ ಉಡುಪಿ ಜಿಲ್ಲಾಡಳಿತವು, ಕುಂದಾಪುರದ ಸಹಾಯಕ ಆಯುಕ್ತರು ಜುಲೈ 08 ಯಾವುದೇ ರಜೆ ಘೋಷಿಸಿ ಆದೇಶ ಮಾಡಿರುವುದಿಲ್ಲ, ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಸ್ಪಷ್ಟನೆ ನೀಡಿದೆ.