Friday, July 1, 2022

Latest Posts

ಮುಂದಿನ ಒಂದೂವರೆ ತಿಂಗಳು ರಸಗೊಬ್ಬರ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ: ಸಚಿವ ಡಿ.ವಿ. ಸದಾನದಂಗೌಡ ಭರವಸೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮುಂದಿನ ಒಂದೂವರೆ ತಿಂಗಳು ರಸಗೊಬ್ಬರ ಬೆಲೆಯಲ್ಲಿ ಯಾವುದೇ ಏರಿಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ರಾಸಾಯಿನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನದಂಗೌಡ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ತಯಾರಿಸಲು ಬೇಕಾದ ಕಚ್ಚಾವಸ್ತುಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದ್ದು, ಇದರಿಂದ ಭಾರತೀಯ ಉತ್ಪಾದನೆಯ ಮೇಲೆಯೂ ಪರಿಣಾಮ ಬೀರಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಾಗಿದ್ದರೂ, ಕೇಂದ್ರ ಸರ್ಕಾರ ಹೆಚ್ಚಿನ ಸಬ್ಸಿಡಿ ನೀಡುವ ಮೂಲಕ ರೈತರ ಮೇಲೆ ಪರಿಣಾಮ ಬೀರದಂತೆ ಮಾಡುತ್ತಿದ್ದು, ಈ ವರ್ಷ 1.20 ಲಕ್ಷ ಕೋಟಿ ರೂ.ಗಳ ಸಬ್ಸಿಡಿಯನ್ನು ನೀಡಲಾಗಿದೆ ಎಂದರು.
ರಸಗೊಬ್ಬರ ತಯಾರಿಸುವ ಘಟಕಗಳಾದ ಇಪ್ಕೋ, ಎಂಸಿಎಫ್, ಟಿಪ್ಕೋ, ಐಸಿಎಲ್, ಎನ್ ಎಫ್ ಎಲ್ ಸೇರಿದಂತೆ ಹಲವು ಘಟಕ ಪರಿಶೀಲನೆಯನ್ನು ನಡೆಸಲಾಗಿದೆ. ಈ ಸಂದರ್ಭದಲ್ಲಿ ಈ ಘಟಕಗಳು ತಮಗೆ ಬೇಕಾದ ಕಚ್ಚಾವಸ್ತುಗಳನ್ನು ಹೆಚ್ಚುವರಿಯಾಗಿ ಹಿಂದಿನ ಬೆಲೆಗೆ ಖರೀದಿಸಿರುವ ಬಗ್ಗೆ ತಿಳಿದು ಬಂದ ಹಿನ್ನೆಲೆಯಲ್ಲಿ ರಸಗೊಬ್ಬರದ ಬೆಲೆಯಲ್ಲಿ ಯಾವುದೇ ಏರಿಕೆ ಮಾಡದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss