Monday, October 13, 2025

ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ ರದ್ದು ಮಾಡಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ (BPL) ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಬದಲಾಗಿ ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್‌ಗೆ (APL Card) ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

error: Content is protected !!