ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೋವಿಡ್ ಲಾಕ್‌ಡೌನ್ ವೇಳೆ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಳ ಬಗ್ಗೆ ಮಾಹಿತಿಯಿಲ್ಲ: ಕೇಂದ್ರ ಸಚಿವೆ ಸ್ಮೃತಿ ಇರಾನಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ಸಂಬಂಧಿತ ಲಾಕ್‌ಡೌನ್ ಸನ್ನಿವೇಶಗಳಿಂದಾಗಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಹೆಚ್ಚಳ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು, ಕ್ರಾಮಿಕ ಸಮಯದಲ್ಲಿ ಮಕ್ಕಳ ಆರೈಕೆ ಮತ್ತು ರಕ್ಷಣೆಗಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಪ್ರದೇಶದ ಆಡಳಿತಗಳಿಗೆ ತಮ್ಮ ಸಚಿವಾಲಯವು ಸಲಹೆಗಳು ಮತ್ತು ಮಾರ್ಗಸೂಚಿಗಳನ್ನು ನೀಡಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಕೊರೋನಾ ಕಾರಣದಿಂದಾಗಿ ಉಂಟಾದ ಆರ್ಥಿಕ ಸಮಸ್ಯೆಯಿಂದಾಗಿ ದೇಶಾದ್ಯಂತ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಹೇಳಿದರು.
ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಒದಗಿಸಿದ ಮಾಹಿತಿಯ ಪ್ರಕಾರ, ಕೋವಿಡ್‌ ಸಂಬಂಧಿತ ಲಾಕ್‌ಡೌನ್‌ನಿಂದಾಗಿ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹಾಗೆಯೇ ಕೋವಿಡ್‌ನಿಂದ ಉಂಟಾದ ಆರ್ಥಿಕ ತೊಂದರೆಗಳಿಂದ ದೇಶದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಹೆಚ್ಚಳದ ಮಾಹಿತಿಯೂ ಇಲ್ಲ ಎಂದಿದ್ದಾರೆ.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವೆ ಇರಾನಿ, ಕಳೆದ ಐದು ವರ್ಷಗಳಲ್ಲಿ ಎನ್‌ಸಿಪಿಸಿಆರ್ ಸ್ವೀಕರಿಸಿದ ಮತ್ತು ವಿಲೇವಾರಿ ಮಾಡಿದ ದೂರುಗಳ ಬಗ್ಗೆ ಮಾಹಿತಿ ನೀಡಿದರು. ಅಂಕಿಅಂಶಗಳ ಪ್ರಕಾರ, 2016-17 ರಿಂದ 2020-21ರವರೆಗಿನ ಕಳೆದ ಐದು ವರ್ಷಗಳಲ್ಲಿ ಮಕ್ಕಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗವು 50,857 ದೂರುಗಳನ್ನು ಸ್ವೀಕರಿಸಿದೆ. ಅದರಲ್ಲಿ 20,836 ವಿಲೇವಾರಿ ಮಾಡಲಾಗಿದೆ. ಮಧ್ಯಪ್ರದೇಶದಿಂದ 9,572, ಉತ್ತರ ಪ್ರದೇಶ 5,340, ಛತ್ತೀಸ್‌ಗಢದಿಂದ 4,685 ಮತ್ತು ಒಡಿಶಾ 4,276 ಕ್ಕೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಇದು ಅಧಿಕ ಪ್ರಕರಣಗಳು ಆಗಿದೆ.
ಈ ನಡುವೆ ಕೊರೋನಾ ಸೋಂಕು ಆರಂಭವಾದ 14 ತಿಂಗಳುಗಳಲ್ಲಿ 21 ದೇಶದಗಳಲ್ಲಿ ಸುಮಾರು 1.5 ಮಿಲಿಯನ್ ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ಈ ಪೈಕಿ 1,90,000 ಮಕ್ಕಳು ಭಾರತದಲ್ಲಿದ್ದಾರೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ. ಭಾರತದಲ್ಲಿ 2,898 ಮಕ್ಕಳು ತಮ್ಮ ಪಾಲನೆ ಮಾಡುತ್ತಿದ್ದ ಅಜ್ಜಿಯಂದಿರನ್ನು ಕಳೆದುಕೊಂಡಿದ್ದರೆ, 9 ಮಕ್ಕಳು ಅಜ್ಜಿ ಅಜ್ಜ ಇಬ್ಬರನ್ನೂ ಕಳೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss