ಬಿಜೆಪಿ ತೊರೆಯುವ ಯೋಚನೆಯೇ ಇಲ್ಲ: ಮಾಜಿ ಸಚಿವ ಡಾ. ಸುಧಾಕರ್ ಸ್ಪಷ್ಟೋಕ್ತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್​ಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸ್ವತಃ ಸುಧಾಕರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ ತತ್ವ, ಸಿದ್ಧಾಂತಗಳನ್ನು ನಂಬಿ ಬಿಜೆಪಿ ಸೇರಿದ್ದೇನೆ. ಈಗ ಬಿಜೆಪಿ ತೊರೆಯುವ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದಾರೆ. ಈ ಮೂಲಕ ಸುಧಾಕರ್ ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡು ಟ್ವೀಟ್ ಮಾಡಿರುವ ಸುಧಾಕರ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಪಕ್ಷ ಸೇರಿದ್ದು, ಬಿಜೆಪಿ ಪಕ್ಷ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ತೊರೆಯುತ್ತೇನೆ ಎಂಬ ಊಹಾಪೋಹಗಳನ್ನು ಕೆಲವರು ಪದೇ ಪದೇ ಹುಟ್ಟುಹಾಕುತ್ತಿದ್ದು, ಮಾಧ್ಯಮಗಳು ಇಂತಹ ವದಂತಿಗಳಿಗೆ, ಗಾಳಿಸುದ್ದಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!