Friday, September 29, 2023

Latest Posts

ಜಿ20 ಔತಣಕೂಟಕ್ಕೆ ಖರ್ಗೆಗೆ ಇಲ್ಲ ಆಹ್ವಾನ: ರಾಹುಲ್ ಗಾಂಧಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಆಯೋಜಿಸಿದ್ದ ಜಿ20 ಔತಣಕೂಟಕ್ಕೆ (G20 Summit) ಕಾಂಗ್ರೆಸ್ ಮುಖ್ಯಸ್ಥ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಆಹ್ವಾನಿಸದ ಕಾರಣ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ (ಸೆಪ್ಟೆಂಬರ್ 8) ಬೆಲ್ಜಿಯಂನ ಬ್ರಸೆಲ್ಸ್ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸದಿರಲು ನಿರ್ಧರಿಸಿದ್ದಾರೆ. ಅವರು ಭಾರತದ ಜನಸಂಖ್ಯೆಯ 60 ಪ್ರತಿಶತದಷ್ಟು ನಾಯಕರನ್ನು ಗೌರವಿಸುವುದಿಲ್ಲ ಎಂದು ಅದು ನಿಮಗೆ ಹೇಳುತ್ತದೆ ಎಂದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡಿನ ಎಂಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಜಾರ್ಖಂಡ್‌ನ ಹೇಮಂತ್ ಸೊರೆನ್, ಪಂಜಾಬ್‌ನ ಭಗವಂತ್ ಮಾನ್ ಮತ್ತು ದೆಹಲಿಯ ಅರವಿಂದ ಕೇಜ್ರಿವಾಲ್ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ, ಜಿ20 ಔತಣಕೂಟಕ್ಕೆ ಖರ್ಗೆ ಅವರನ್ನು ಆಹ್ವಾನಿಸಿಲ್ಲ ಎಂದು ಅವರ ಕಚೇರಿ ಖಚಿತಪಡಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!