ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ ಆರಂಭವಾದ ನಂತರ ಭಾರತ-ಪಾಕ್ ನಡುವೆ ಉದ್ವಿಗ್ನತೆ ವಾತಾವರಣ ನಿರ್ಮಾಣವಾಗಿದೆ. ಇಷ್ಟೇ ಅಲ್ಲದೆ ಯಾವ ಕ್ಷಣದಲ್ಲಾದರೂ ಯುದ್ಧ ಆರಂಭವಾಗಬಹುದಾಗಿದೆ. ಈ ಎಲ್ಲ ಅಪ್ಡೇಟ್‌ಗಳು, ಕ್ಷಣ ಕ್ಷಣದ ಸುದ್ದಿಗಳು ಕೂಡ ಮೀಡಿಯಾದಲ್ಲಿ ಕವರ್ ಆಗುತ್ತಿದೆ. ಆದರೆ ಸೇನಾ ಕಾರ್ಯಾಚರಣೆಯ ಲೈವ್ ಕವರೇಜ್ ಮಾಡಬೇಡಿ ಎಂದು ಮೀಡಿಯಾಗಳಿಗೆ ರಕ್ಷಣಾ ಇಲಾಖೆ ಸೂಚನೆ ನೀಡಿದೆ.
ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಅಥವಾ ರಿಯಲ್ ಟೈಮ್ ರಿಪೋರ್ಟ್ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ. ಅಂತಹ ಸೂಕ್ಷ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ಕಾರ್ಯಾಚರಣೆಯ ಪರಿಣಾಮಕಾರಿತ್ವಕ್ಕೆ ಅಪಾಯ ಉಂಟುಮಾಡಬಹುದು ಮತ್ತು ಸೇನಾ ಸಿಬ್ಬಂದಿ ಜೀವಗಳಿಗೆ ಅಪಾಯವನ್ನು ಉಂಟುಮಾಡಬಹುದು ಎಂದು ರಕ್ಷಣಾ ಇಲಾಖೆ ಹೇಳಿದೆ.