Thursday, July 7, 2022

Latest Posts

ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ: ಸಚಿವ ಸುನೀಲ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ವಿಧಾನ ಪರಿಷತ್ ನಲ್ಲಿ ಸದಸ್ಯ ಹರೀಶ್ ಕುಮಾರ್ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರು, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾಲಂಬನೆ ಸಾಧಿಸಲಾಗಿದೆ. ಈ ಹಿನ್ನಲೆಯಲ್ಲಿ ವಿದ್ಯುತ್ ಕೊರತೆಯಿಲ್ಲ. ಬೇಸಿಗೆಯಲ್ಲಿ ಲೋಡ್ ಶೆಡ್ಡಿಗ್ ಜಾರಿ ಮಾಡೋದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಬೇಸಿಗೆಯಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಮಾಡುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss