Friday, July 1, 2022

Latest Posts

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲ್ಲ: ಸಚಿವ ಡಿ.ಸುಧಾಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಸದ್ಯ ಯಾವುದೇ ಲಾಕ್​ಡೌನ್​ ಮಾಡುವುದಿಲ್ಲ. ಆದರೆ ಕಠಿಣ ನಿಮಯಾವಳಿಗಳನ್ನು ಜಾರಿಗೆ ತರಲಾಗುತ್ತದೆ ವ ಆರೋಗ್ಯ ಸಚಿವ ಡಿ.ಸುಧಾಕರ್ ಹೇಳಿದ್ದಾರೆ.
ಹಲವಾರು ರಾಜ್ಯಗಳಲ್ಲಿ ಲಾಕ್​ಡೌನ್​, ಕರ್ಫ್ಯೂ ಎಲ್ಲವನ್ನೂ ವಿಧಿಸಿದ್ದು, ಕರ್ನಾಟಕದಲ್ಲಿ ಕೂಡ ಲಾಕ್ ಡೌನ್ ಆಗುತ್ತಾ ಎಂಬ ಗೊದಲಗಳಿಗೆ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಗೃಹಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಜೊತೆ ಸಭೆ ಮಾಡಿದ್ದೇವೆ. ನಾಳೆ ಈ ಕುರಿತು ಸಭೆ ಕರೆಯಲಾಗಿದ್ದು, ಈ ಹಿನ್ನೆಲೆ ನಾಳೆಯ ಸಭೆಯ ಪೂರ್ವಭಾವಿಯಾಗಿ ಇಂದು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಬೆಂಗಳೂರು ಪರಿಸ್ಥಿತಿ, ಸ್ಥಿತಿಗತಿ ಬಗ್ಗೆ ಚರ್ಚೆ ಮಾಡಲಾಗಿದೆ. ಗೃಹ ಇಲಾಖೆಯಿಂದಲೂ ಮಾಹಿತಿ ಪಡೆಯಲಾಗಿದೆ. ವಿಪತ್ತು ನಿರ್ವಹಣೆ ಇಂದ ಹಣ ಬಿಡುಗಡೆ ಮಾಡಲಾಗಿದೆ. ನಾಳೆ ಸಂಸದರು, ಶಾಸಕರ ಜೊತೆ ಸಮಗ್ರವಾಗಿ ಸಭೆ ಮಾಡಲಾಗುವುದು. ಅದರಲ್ಲಿ ಅಭಿಪ್ರಾಯ ಸಂಗ್ರಹಿಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss