ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಕ್ತಿ ಯೋಜನೆಯಿಂದ ಯಾವುದೇ ನಷ್ಟವಾಗಿಲ್ಲ. ಶಕ್ತಿ ಯೋಜನೆಯಿಂದ ಬರಬೇಕಾದ ಹಣ ಸಾರಿಗೆ ಇಲಾಖೆಗೆ ಬಂದಿದೆ ಎಂದು ರಾಮನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 8.8 ಕೋಟಿಗೂ ಹೆಚ್ಚು ಹಣ ಸಾರಿಗೆ ಇಲಾಖೆಗೆ ಬಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ 10 ಸಾವಿರ ಮಂದಿಯನ್ನು ಕೆಎಸ್‌ಆರ್‌ಟಿಸಿಗೆ ನೇಮಕ ಮಾಡಿಕೊಂಡಿದ್ದೇವೆ ಎಂದರು.
ರಾಮನಗರ ಜಿಲ್ಲೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದೇವೆ. ಫೆ. 4 ರಂದು ಪ್ರಗತಿ ಪರಿಶೀಲನಾ ಸಭೆ ಕರೆದಿದ್ದೇನೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸಿಎಂ ಬಳಿ ಮಾತನಾಡುತ್ತೇನೆ ಎಂದು ತಿಳಿಸಿದರು.