ಏಪ್ರಿಲ್ 2ರಿಂದ ‘ಮಹಾ’ ರಾಜ್ಯದಲ್ಲಿ ನೋ ಮಾಸ್ಕ್ , ನೋ ಕೋವಿಡ್ ರೂಲ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಮೂರನೇ ಅಲೆ ಸಂಪೂರ್ಣವಾಗಿ ಹತೋಟಿಗೆ ಬಂದಿದೆ. ಹೀಗಾಗಿ, ಏಪ್ರಿಲ್ 2ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಮೇಲಿನ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಠಾಕ್ರೆ ಸರ್ಕಾರ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೆ ಮಾಸ್ಕ್ ಹಾಕಿಕೊಳ್ಳುವುದು ಕೂಡಾ ಕಡ್ಡಾಯವಲ್ಲ ಎಂದಿದೆ.
ಇಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ, ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಕೋವಿಡ್​​ ಸೋಂಕು ಪ್ರಕರಣಗಳಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿದೆ. ಹೀಗಾಗಿ ಏಪ್ರಿಲ್ 2ರಿಂದ ಕೋವಿಡ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಆದರೆ ಜನರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬಾರದು ಎಂಬ ಉದ್ದೇಶದಿಂದ ಅಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!