ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿಗರಿಗೆ ಡೆಂಗ್ಯೂ ಜತೆಗೆ ಮಲೇರಿಯಾ ಸಂಕಷ್ಟ ಹೆಚ್ಚಾಗಿದೆ. ಸೊಳ್ಳೆಗಳ ಕಡಿತದಿಂದ ನಾನಾ ಸಮಸ್ಯೆಗಳನ್ನು ಜನ ಎದುರಿಸುತ್ತಿದ್ದಾರೆ.
ಕರ್ನಾಟಕದಲ್ಲಿ ಈ ವರ್ಷ ನೀರಿಕ್ಷೆಗೂ ಮೀರಿ ಊಹೆಗೂ ಸಿಗದಂತೆ ಡೆಂಗ್ಯೂ ಜ್ವರ ಜನರ ಜೀವ ಹಿಂಡುತ್ತಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 443 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 15544ಕ್ಕೆ ಏರಿಕೆಯಾದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುವಾರ ಕೂಡಾ 203 ಡೆಂಗ್ಯೂ ಪಾಸಿಟಿವ್ ಕೇಸ್ಗಳು ಕಂಡು ಬಂದಿದ್ದು ಈ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ 6995 ಪ್ರಕರಣಗಳು ವರದಿಯಾಗಿ ಆತಂಕ ಹೆಚ್ಚಿಸಿದೆ.
ರಾಜಧಾನಿಯಲ್ಲಿ ಶೇ 80 ರಷ್ಟು ಡೆಂಗ್ಯೂ ಕೇಸ್ ಕಂಡುಬಂದರೆ ಶೇ 20 ರಷ್ಟು ಮಲೇರಿಯಾ ಕೇಸ್ಗಳು ಪತ್ತೆಯಾಗುತ್ತಿವೆ.