ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವು ಚುನಾವಣೆ ವೇಳೆ ನೀಡಿರುವ 5 ಗ್ಯಾರಂಟಿಗಳನ್ನು ಎಷ್ಟೇ ಕಷ್ಟ ಬಂದರೂ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಶ್ರೀ ಕಾಗಿನೆಲೆ (Kaginelli) ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದ ಅವರು, ಯಾರೇ ಆಡಿಕೊಂಡರೂ ಈ ವರ್ಷದ ಬಜೆಟ್‍ನಲ್ಲೇ 5 ಘೋಷಣೆಗಳಿಗೂ ಹಣ ಕೊಡುತ್ತೇವೆ. ನಮ್ಮ ಘೋಷಣೆಗಳು ಜಾತಿ-ಧರ್ಮ ಮೀರಿರುವಂತಹ ಘೋಷಣೆಗಳಾಗಿದೆ. ಎಲ್ಲಾ ಜನಾಂಗದ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಇವರ ಸಂಕಷ್ಟ ನಿವಾರಣೆಗಾಗಿ ಈ ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ನಾನು ಅಧಿಕಾರದಲ್ಲಿ ಇರುವವರೆಗೂ ಶೋಷಿತ ಜಾತಿಗಳಿಗೆ, ದಲಿತ ಸಮುದಾಯಗಳಿಗೆ, ಅಲ್ಪ ಸಂಖ್ಯಾತ ಸಮುದಾಯಗಳು ಹಾಗೂ ಎಲ್ಲಾ ಜಾತಿಯ ಬಡವರ ಏಳಿಗೆಗೆ ಶ್ರಮಿಸುತ್ತೇನೆ. ನಾನು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ಕೊನೆಯವರೆಗೂ ರಾಜಕಾರಣದಲ್ಲಿ ಕ್ರಿಯಾಶೀಲವಾಗಿರುತ್ತೇನೆ. ಬಡವರ ಪರ ರಾಜಕಾರಣ, ಹೋರಾಟ ಮುಂದುವರೆಸುತ್ತೇನೆ. ಈ ಸಲುವಾಗಿ ಹೋರಾಡುತ್ತೇನೆ ಎಂದು ಭರವಸೆ ಎಂದಿದ್ದಾರೆ.